Kourava News

ಆಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿರು ೫೦೦೦ ರೂ ಪಡೆಯಲು ಸರ್ಕಾರದ ಷರತ್ತುಗಳೇನು?.

ಮಾಹಿತಿ ಇಲ್ಲಿದೆ....

 


ಬೆಂಗಳೂರು: ಕೋವಿಡ್-೧೯ ಲಾಕ್‌ಡೌನ್ ಹಿನ್ನೆಲೆ ಆದಾಯ ಕಳೆದುಕೊಂಡಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ೫೦೦೦ ರೂಪಾಯಿ ಪರಿಹಾರ ಧನ ನೀಡ್ತಿದೆ. ಅರ್ಹರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಈ ಯೋಜನೆ ಪಡೆಯಲು ಯಾವೆಲ್ಲಾ ಚಾಲಕರು ಅರ್ಹರಾಗಿದ್ದಾರೆ ಮತ್ತು ಸರ್ಕಾರದ ಷರತ್ತುಗಳೇನು ಎಂಬುದರ ಮಾಹಿತಿ ಇಲ್ಲಿದೆ. ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.
ಫಲಾನುಭವಿಗಳು ದಿನಾಂಕ: ೦೧-೦೩-೨೦೨೦ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ನಮೂದಿಸಬೇಕು.
ಚಾಲಕರ ಆಧಾರ್ ಕಾರ್ಡ್ ವಿವರ, ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್‌ನಲ್ಲಿ ನಮೂದಿಸಬೇಕು.
ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕ್‌ನ IಈSಅ ಕೋಡ್, ಒIಅಖ ಕೋಡ್‌ಗಳ ವಿವರಗಳನ್ನು ಸಹ ಪೋರ್ಟಲ್‌ಗೆ ನೀಡಬೇಕು.
ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-೪ ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು.
ಆಟೋರಿಕ್ಷಾ ಅಥವಾ ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದೆ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು.
ಈ ಯೋಜನೆಯನ್ನು ಜಾರಿಗೊಳಿಸಲು ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ಸೇವಾಸಿಂಧುವಿನ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಬೇಕಾಗಿರುತ್ತದೆ. ಈ ಬಗ್ಗೆ ಸೇವಾಸಿಂಧುವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ.
ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ ಪರಿಹಾರ ಹಣವನ್ನ ಆಃಖಿ ಮಾಡಬೇಕು ಅಥವಾ ಆನ್‌ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು.
ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ ಅಥವಾ ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು ಎನ್ನಲಾಗಿದೆ.