Breaking News

ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಬಹುಮಾನಕ್ಕೆ ಅರ್ಜಿ ಆಹ್ವಾನ

ಜನವರಿ ೨೦೨೦ ರಿಂದ ಡಿಸೆಂಬರ್ ೨೦೨೦ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ

ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಬಹುಮಾನಕ್ಕೆ ಅರ್ಜಿ ಆಹ್ವಾನ
ಹಾವೇರಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ ೨೦೨೦ ರಿಂದ ಡಿಸೆಂಬರ್ ೨೦೨೦ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು , ಕಲಾವಿದರಿಗೆ ‘ಕನ್ನಡ ಪುಸ್ತಕ ಸೊಗಸು-೨೦೨೦’ ಬಹುಮಾನವನ್ನು ನೀಡಲಾಗುವುದು.
ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ ದೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ-೨೦-೦೨-೨೦೨೧ ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨ ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -೫೬೦೦೦೨ ವೆಬ್‌ಸೈಟ್  www.kannadapustakapradhikara. com , ದೂರವಾಣಿ ಸಂಖ್ಯೆ: ೦೮೦-೨೨೪೮೪೫೧೬ / ೨೨೧೦೭೭೦೪ ನ್ನು ಸಂಪರ್ಕಿಸಬಹುದಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button
Close