ರಾಣೆಬೆನ್ನೂರು: ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿದ್ದ ಬೆಂಗಳೂರಿನ ನಿವಾಸಿ ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿ ಮೇಲೆ ರಾಣೆಬೆನ್ನೂರಿನಲ್ಲಿ ಕುರುಬ ಸಮುದಾಯದ ಪ್ರಮುಖರು ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿ ಇತ್ತೀಚೆಗೆ ಸಿದ್ದರಾಮಯ್ಯನವರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎನ್ನಲಾಗಿದ್ದು, ಈ ವಿಡಿಯೋದಿಂದ ಜನರ ಹಾಗೂ ಸಮುದಾಯದ ಭಾವನೆಗಳಿಗೆ ಅಪಮಾನ ಮಾಡಿದಂತಾಗಿದೆ. ಕೂಡಲೇ ಪುನೀತ್ ಎಂಬ ವ್ಯಕ್ತಿಯನ್ನು ಬಂಧಿಸಿಬೇಕು ಎಂದು ಆಗ್ರಹಿಸಿ ಪೊಲೀಸರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ನಿಂಗರಾಜ ಕೋಡಿಹಳ್ಳಿ, ಮೃತ್ಯುಂಜಯ ಗುದಿಗೇರ, ನಾಗರಾಜ ಸೇರಿದಂತೆ ಅನೇಕರು ಈವೇಳೆ ಹಾಜರಿದ್ದರು.