ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸ್ಥಾಪಕ ಮುತ್ತಪ್ಪ ರೈ ಚಿಕಿತ್ಸೆ ಫಲಿಸದೆ ತಡರಾತ್ರಿ 2.30ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮುತ್ತಪ್ಪ ರೈ ಅವರನ್ನು ಏಪ್ರಿಲ್ 30 ರಂದು ಮಣಿಪಾಲ್ ಆಸ್ಪತ್ರೆಗೆ ದಾಾಖಲಿಸಲಾಗಿತ್ತು.
ಕಳೆದ ಮೂರ್ನಾಲ್ಕು ದಿನಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಕೊರೊನಾ ಹಿನ್ನೆಲೆ ಹೆಚ್ಚು ಜನ ಸೇರಬಾರದು ಎಂದು ಆಸ್ಪತ್ರೆ ಸುತ್ತ ಬ್ಯಾರಿಕೇಡ್ ಅಳವಡಿಸಿ ಭದ್ರತೆ ಕೈಗೊಳ್ಳಲಾಗಿದೆ.
ಮೃತದೇಹವನ್ನ ಬಿಡದಿಯಲ್ಲಿರುವ ಅವರ ಮನೆಗೆ ತೆಗೆದುಕೊಂಡು ಹೋಗಿ ಅಲ್ಲಿ ಅಂತಿಮ ಸಂಸ್ಕಾರ ಮಾಡಲು ಸಂಬಂಧಿಕರು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.