Kourava News

ರಾಣೆಬೆನ್ನೂರು; ಎತ್ತಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ಸಾವು

ತಾಲೂಕಿನ ಕಾಕೋಳಬಳಿಕೆರೆಗೆ ಎತ್ತಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಸಾವನ್ನಪ್ಪಿರುವ ಬಾಲಕರನ್ನು ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಮಾಲತೇಶ ಬೀರಪ್ಪ ಹೊಟ್ಟಿನಿಂಗಣ್ಣನವರ 4 ನೇ ತರಗತಿ 11 ವರ್ಷ,  ಚಂದ್ರು ಅಶೋಕ ಹಡಗಲಿ 7ನೇ ತರಗತಿ 13ವರ್ಷದ ಬಾಲಕ ಎಂದು ಗುರುತಿಸಲಾಗಿದೆ.
 ಈ ಇಬ್ಬರು ಬಾಲಕರುಗ್ರಾಮದ ಬಾಳಿ ಕೆರೆಗೆ  ಕೆರೆಯಲ್ಲಿ ಎತ್ತಿನ ಮೈ ತೊಳೆಯಲು ಹೋಗಿದ್ದ ವೇಳೆ ಇಬ್ಬರು ಬಾಲಕರುಈಜಲಾರದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಈಬಾಲಕರು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4 ಮತ್ತು 7ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದರು
ಶವಗಳನ್ನು ಸಮೀಪದ ಬ್ಯಾಡಗಿ ಸರಕಾರಿ ಆಸ್ಪತ್ರೆಯಲ್ಲಿ ಕರೆದುಕೊಂಡು ಹೋಗಿದ್ದು ಡಾಕ್ಟರ್ ಮೃತಪಟ್ಟ ಬಗ್ಗೆ ಖಚಿತ ಪಡಿಸಿದ್ದಾರೆ
ಈ ಕುರಿತು ರಾಣೆಬೆನ್ನೂರು ಗ್ರಾಮೀಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.