ಹಾವೇರಿ: ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಪ್ರಸ್ತಾವ ಪಕ್ಷದ ಮುಂದಿದೆ. ಆದರೆ, ಈ ಬಗ್ಗೆ ಪಕ್ಷದ ಹೈಕಮಾಂಡಒಪ್ಪಿದರೆ ಮುಂದುವರೆಯಲಾಗುವುದು ಎಂದು ಕೆಪಿಸಿಸಿ ಕಾರ್ಯದ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ಗುರುವಾರ ಹಾವೇರಿಗೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಜೆಡಿಎಸ್ ನೊಂದಿಗೆ ಹೊಂದಾಣಿಕೆ ಸಂಬಂಧ ಮಾತುಕತೆ ನಡೆಸುತ್ತಿದ್ದೇವೆ. ನಮ್ಮ ಪಕ್ಷದ ಹಿರಿಯರು ಮತ್ತು ಜೆಡಿಎಸ್ ಮುಖಂಡರ ಜೊತೆ ಮಾತುಕತೆ ಮಾಡಬೇಕು. ನಂತರ ಈ ಕುರಿತು ತಿರ್ಮಾನ ತೆಗೆದುಕೊಳ್ಳುತ್ತೇವೆ. ಜೂನ್ ೭ನೇ ತಾರೀಖಿನಂದು ನಡೆಯುವ ಕಾಂಗ್ರೇಶ್ ಅಧ್ಯಕ್ಷರ ಪದಗ್ರಹಣ ಹಿನ್ನಲೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಈ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗ ಬೇಕು . ಬೆಂಗಳೂರಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ಮಾಡುತ್ತಿದ್ದೇವೆ. . ಆದರೆ, ಕೊರೊನಾ ಸಂಬಂಧ ಸೀಮಿತ ಜನರು ಹೋಗಬೇಕಾದ ಅನಿವಾರ್ಯ ಮತೆ ಇದೆ. ಬೆಂಗಳೂರಿನಲ್ಲಿ ಸ್ವಲ್ಪ ಜನರಷ್ಟೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದರು. ಈಸಂದರ್ಭದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ, ಎಂ.ಎಂ.ಹಿರೇಮಠ ಪ್ರಮುಖರಾದ ಪ್ರಕಾಶ ಹಾದಿಮನಿ, ಬಸವರಾಜ ಮತ್ತಿತರರು ಹಾಜರಿದ್ದರು.