ಹಾವೇರಿ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಹಾವೇರಿ ಯ ದ್ಯಾಮವ್ವನ ಗುಡಿ ಓಣಿಯಲ್ಲಿ ನಡೆದಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಸಂಜೆ ಪ್ರಕಟವಾಗಿದ್ದು ,ವಿದ್ಯಾರ್ಥಿ ನಿ ಮೆತಮೆಟಿಕ್ಸ್ ಪರೀಕ್ಷೆಯಲ್ಲಿ ಫೇಲಾಗಿದ್ದಳು ಎನ್ನಲಾಗಿದ್ದು. ಇದರಿಂದ ಮನನೊಂದ ವಿದ್ಯಾರ್ಥಿನಿ ದ್ಯಾಮವ್ವನ ಗುಡಿ ಓಣಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಾಲಕಿ ಒದ್ದಾಟವನ್ನು ಗಮನಿಸಿದ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆಂದು ಹೇಳಲಾಗುತ್ತಿದೆ.
ಬಾಲಕಿಯು ಸ್ಥಳೀಯ ಗೆಳೆಯರ ಬಳಗ ಆಂಗ್ಲ ಮಾಧ್ಯಮ ಶಾಲೆಯವಿದ್ಯಾರ್ಥಿನಿ ಎನ್ನಲಾಗುತ್ತಿದೆ. ಬಾಲಕಿಯ ಹೆಸರು ವ್ಯೆಷ್ಣವಿ ರಿತ್ತಿ ಎನ್ನಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಗೆ ಬಿಇಓ ಎಮ್.ಎಚ್.ಪಾಟೀಲ ಭೇಟಿ ನೀಡಿದ್ದರು.