Kourava News

ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ತರಕಾರಿ, ಹಣ್ಣು ಮತ್ತು ಹೂವು ಸಾಗಾಣಿಕೆ ಹಾಗೂ ಮಾರಾಟಕ್ಕೆ ಅವಕಾಶ

ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ
ತರಕಾರಿ, ಹಣ್ಣು ಮತ್ತು ಹೂವು ಸಾಗಾಣಿಕೆ ಹಾಗೂ ಮಾರಾಟಕ್ಕೆ ಅವಕಾಶ
ಹಾವೇರಿ: ಕೋವಿಡ್-೧೯ ಸಾಂಕ್ರಾಮಿಕ ರೋಗವು ತೀವ್ರ ಗತಿಯಲ್ಲಿ ಹರಡುತ್ತಿರುವುದರಿಂದ ರಾಜ್ಯ ಸರ್ಕಾರವು ಏಪ್ರಿಲ್ ೨೮ ರಿಂದ ೧೪ ದಿನಗಳವರೆಗೆ ಕರ್ಫ್ಯೂ ಜಾರಿಗೊಳಿಸಿರುತ್ತದೆ. ಈ ಸಂದರ್ಭದಲ್ಲಿ ತರಕಾರಿ, ಹಣ್ಣು ಮತ್ತು ಹೂವು ತೋಟಗಾರಿಕೆ ಉತ್ಪನ್ನಗಳ ಸಾಗಾಣಿಕೆ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ.
ತರಕಾರಿ, ಹಣ್ಣು ಮತ್ತು ಹೂವುಗಳನ್ನು ರೈತರ ಜಮೀನುಗಳಿಂದ ಖರೀದಿಸಲು ಮತ್ತು ಸಾಗಾಣಿಕೆ ಮಾಡಲು ಹಾಗೂ ಜಿಲ್ಲೆಯ ಒಳಗಡೆ, ಬೇರೆ ಜಿಲ್ಲೆಗಳಿಗೆ ಮತ್ತು ಅಂತರರಾಜ್ಯಗಳಿಗೆ ಸಾಗಾಣಿಕೆ ಮಾಡಲು ಇಚ್ಚಿಸುವ ವ್ಯಾಪಾರಸ್ಥರು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಹಾಗೂ ತೋಟಗಾರಿಕೆ ಉಪ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸಿದಲ್ಲಿ ತಕ್ಷಣ ಪರವಾನಿಗೆ ಪತ್ರ ವಿತರಿಸಲಾಗುವುದು. ಹೆಚ್ಚಿನ ಸಂಖ್ಯೆಯ ರೈತರು ಹಾಗೂ ವ್ಯಾಪಾರಸ್ಥರು ಇದರ ಸದುಪಯೋಗಪಡಿಸಿಕೊಳ್ಳಲು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.