ರಾಜ್ಯ

ನಿತ್ಯೋತ್ಸವ ಕವಿ ಕೆ.ಎಸ್. ನಿಸಾರ್ ಅಹಮ್ಮದ್ ವಿಧಿವಶ

ಬೆಂಗಳೂರು : ನಿತ್ಯೋತ್ಸವ ಕವಿ ಎಂದೆ ತಮ್ಮ ಜೋಗದ ಸಿರಿ ಬೆಳಕಿನಲ್ಲಿ ಕವನದಿಂದ ಪ್ರಸಿದ್ಧರಾಗಿದ್ದ ಕೆ.ಎಸ್. ನಿಸಾರ್ ಅಹಮ್ಮದ್ ಕೊಟ್ಯಂಟರ ಸಾಹಿತ್ಯಾಸಕ್ತರನ್ನು ಅಗಲಿದ್ದಾರೆ. ಅಹಮದ್ ರವರ ಪೂರ್ಣ ಹೆಸರು ಕೊಕ್ಕರೆಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್. ನಿತ್ಯೋತ್ಸವದ ಕವಿ ನಿಸಾರ್ ಅಹಮದ್‌ರವರು ಹುಟ್ಟಿದ್ದು ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ ೫, ೧೯೩೬ರಂದು. ತಂದೆ ಷೇಕ್ ಹೈದರ್, ತಾಯಿ ಹಮೀದಾ ಬೇಗಂ. ತಂದೆ ಸರಕಾರಿ ನೌಕರಿಯಲ್ಲಿದ್ದು ಕನ್ನಡ, ಇಂಗ್ಲಿಷ್, ಸಂಸ್ಕೃತ ಬಲ್ಲ ಸುಸಂಸ್ಕೃತರು. ನಿಸಾರ್ ಅವರು ಪ್ರಾಥಮಿಕ, ಮಾಧ್ಯಮಿಕ ಶಾಲೆ ಓದಿದ್ದು ದೇವನಹಳ್ಳಿ. ಪ್ರೌಢಶಾಲೆಗೆ ಹೊಸಕೋಟೆ ಹೈಸ್ಕೂಲು. ನಂತರ ಬೆಂಗಳೂರಿನ ಸೆಂಟ್ರಲ್ ಕಾಲೇಜು ಸೇರಿ ಭೂಗರ್ಭ ಶಾಸ್ತ್ರದಲ್ಲಿ ಆನರ್ಸ್ ಪದವಿ. ಎಲ್. ಗುಂಡಪ್ಪ, ಎಂ.ವಿ. ಸೀತಾರಾಮಯ್ಯ, ರಾಜರತ್ನಂ, ವಿ.ಸೀ. ಇವರ ಗುರುಗಳು. ಕನ್ನಡದಲ್ಲಿ ಆಸಕ್ತಿ ಬೆಳೆಯಲು ಇವರೆಲ್ಲರೂ ಕಾರಣರು.
೧೯೫೭-೫೮ರಲ್ಲಿ ಭೂವಿಜ್ಞಾನಿಯಾಗಿ ಆಯ್ಕೆಯಾಗಿ ಉದ್ಯೋಗ ಆರಂಭಿಸಿದ್ದು ಕಲಬುರಗಿಯಲ್ಲಿ . ಕೆಲಸದಲ್ಲಿ ತೃಪ್ತಿ ದೊರೆಯದೆ ಎಂ.ಎಸ್‌ಸಿ. ಮುಗಿಸಿ ಬೆಂಗಳೂರು ಸರಕಾರಿ ಕಾಲೇಜಿನಲ್ಲಿ ಅಧ್ಯಾಪಕ ವೃತ್ತಿ ಆರಂಭ. ಚಿತ್ರದುರ್ಗ, ಶಿವಮೊಗ್ಗ, ಬೆಂಗಳೂರು ಪುನಃ ಶಿವಮೊಗ್ಗ ಕಾಲೇಜಿನಲ್ಲಿದ್ದಾಗ ನಿವೃತ್ತಿ.
ಸೇವೆಯಲ್ಲಿದ್ದಾಗಲೇ ರಾಜ್ಯಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಪ್ರಕಟಿಸಿದ ’ಚಂದನ’ ತ್ರೈಮಾಸಿಕ, ಸಾಹಿತ್ಯದ ಎಲ್ಲ ಪ್ರಕಾರಗಳ ದಶವಾರ್ಷಿಕ ಸಂಚಿಕೆ ಪ್ರಕಟಣೆ. ದೆಹಲಿಯಲ್ಲಿ ಸೆಮಿನಾರ್ ವ್ಯವಸ್ಥೆ ಮಾಡಿದ ಹೆಗ್ಗಳಿಕೆ. ರಾಷ್ಟ್ರೀಯ ಶಿಕ್ಷಣ ಮತ್ತು ಸಂಶೋಧನಾ ಮಂಡಲಿಯ ಸದಸ್ಯರು. ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಭಾವಗೀತೆಯ ಕ್ಯಾಸೆಟ್ ತಂದ ಕೀರ್ತಿ. ನಿತ್ಯೋತ್ಸವ, ಸುಶ್ರಾವ್ಯ, ನವೋಲ್ಲಾಸ, ಸುಮಧುರ. ಅಪೂರ್ವ, ಹೊಂಬೆಳಕು ಕ್ಯಾಸೆಟ್ಟುಗಳ ಬಿಡುಗಡೆ.
ನಿಸಾರ್ ಅಹಮದ್ ಅವರ ಸಾಹಿತ್ಯಾಸಕ್ತಿ ೧೦ನೇ ವಯಸ್ಸಿನಲ್ಲೇ ಆರಂಭ. “ಜಲಪಾತ’ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ ಸುಮಾರು ೫ ದಶಕಗಳಿಂದ ೨೫ ಕೃತಿಗಳನ್ನು ರಚಿಸಿದ್ದಾರೆ.೨೦೦೬ರಲ್ಲಿ ಶಿವಮೊಗ್ಗದಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ತ್ಯೋತ್ಸವದ ಕವಿ ಕೆ.ಎಸ್. ನಿಸಾರ್ ಅಹಮ್ಮದ್ ಅವರು ವಯೋಸಹಜ ಖಾಯಿಲೆಗಳಿಂದ ನಿಧರಾಗಿದ್ದಾರೆ.
ಕೆ.ಎಸ್. ನಿಸಾರ್ ಅಹಮ್ಮದ್ ಅವರ ಕೃತಿಗಳು ಹೀಗಿವೆ.

ಮನಸು ಗಾಂಧಿ ಬಜಾರು (೧೯೬೦)
ನೆನೆದವರ ಮನದಲ್ಲಿ (೧೯೬೪)
ಸುಮಹೂರ್ತ (೧೯೬೭)
ಸಂಜೆ ಐದರ ಮಳೆ (೧೯೭೦)
ನಾನೆಂಬ ಪರಕೀಯ (೧೯೭೨)
ಆಯ್ದ ಕವಿತೆಗಳು (೧೯೭೪)
ನಿತ್ಯೋತ್ಸವ (೧೯೭೬)
ಸ್ವಯಂ ಸೇವೆಯ ಗಿಳಿಗಳು (೧೯೭೭)
ಅನಾಮಿಕ ಆಂಗ್ಲರು(೧೯೮೨),
ಬರಿರಂತರ (೧೯೯೦)
ಸಮಗ್ರ ಕವಿತೆಗಳು (೧೯೯೧)
ನವೋಲ್ಲಾಸ (೧೯೯೪)
ಆಕಾಶಕ್ಕೆ ಸರಹದ್ದುಗಳಿಲ್ಲ (೧೯೯೮)
ಅರವತ್ತೈದರ ಐಸಿರಿ(೨೦೦೧)
ಸಮಗ್ರ ಭಾವಗೀತೆಗಳು(೨೦೦೧)
ಪ್ರಾತಿನಿಧಿಕ ಕವನಗಳು(೨೦೦೨)
ನಿತ್ಯೋತ್ಸವ ಕವಿತೆ
ಗದ್ಯ ಸಾಹಿತ್ಯ
’ಅಚ್ಚುಮೆಚ್ಚು’
’ಇದು ಬರಿ ಬೆಡಗಲ್ಲೊ ಅಣ್ಣ’
ಷೇಕ್ಸ್ ಪಿಯರ‍್ನ ಒಥೆಲ್ಲೊದ ಕನ್ನಡಾನುವಾದ

ಕೆ.ಎಸ್. ನಿಸಾರ್ ಅಹಮ್ಮದ್ ಅವರಿಗೆ ಸಂದ ಪ್ರಶಸ್ತಿ-ಗೌರವಗಳು
೨೦೦೬ ರ ಮಾಸ್ತಿ ಪ್ರಶಸ್ತಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಗೊರೂರು ಪ್ರಶಸ್ತಿ
ಅನಕೃ ಪ್ರಶಸ್ತಿ
ಕೆಂಪೇಗೌಡ ಪ್ರಶಸ್ತಿ
ಪಂಪ ಪ್ರಶಸ್ತಿ
೧೯೮೧ ರ ರಾಜ್ಯೋತ್ಸವ ಪ್ರಶಸ್ತಿ
೨೦೦೩ ರ ನಾಡೋಜ ಪ್ರಶಸ್ತಿ
೨೦೦೬ ರ ಅರಸು ಪ್ರಶಸ್ತಿ
೨೦೦೬ ಡಿಸೆಂಬರ್‌ನಲ್ಲಿ ಶಿವಮೊಗ್ಗದಲ್ಲಿ ನಡೆದ ೭೩ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button
Close