Breaking News

ಪುಸ್ತಕಗಳ ಖರೀದಿಗೆ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ

ಪುಸ್ತಕಗಳ ಖರೀದಿಗೆ ಅರ್ಜಿ ಆಹ್ವಾನ
ಹಾವೇರಿ: ಕನ್ನಡ ಪುಸ್ತಕ ಪ್ರಾಧಿಕಾರವು ೨೦೧೭ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ದಿನಾಂಕ:೦೧-೦೨-೨೦೨೧ ರಿಂದ ೨೭-೦೨-೨೦೨೧ರವರೆಗೆ ಪ್ರಾಧಿಕಾರದ ವೆಬ್ಸೈಟ್ www.kannadapustakapradhikara.com  ಮೂಲಕ ಹಾಗೂ ಬೆಂಗಳೂರಿನಲ್ಲಿರುವ ಕನ್ನಡ ಪುಸ್ತಕ ಪ್ರಾಧಿಕಾರದ ಕಚೇರಿ ಮತ್ತು ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಕಚೇರಿ ವೇಳೆಯಲ್ಲಿ ಉಚಿತವಾಗಿ, ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ. ಎರಡು ಪುಸ್ತಕಗಳ ಪ್ರತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ೫೬೦ ೦೦೨ ಅವರಿಗೆ ದಿನಾಂಕ:೨೭.೦೨.೨೦೨೧ರಂದು ಸಂಜೆ ೫ ಗಂಟೆಯೊಳಗೆ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ವೆಬ್ಸೈಟ್    www. kannadapustakapradhikara.com,, ದೂರವಾಣಿ ಸಂಖ್ಯೆ: ೦೮೦-೨೨೪೮೪೫೧೬ / ೨೨೦೧೭೭೦೪ನ್ನು ಸಂಪರ್ಕಿಸಬಹುದಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button
Close