ಫೆಬ್ರವರಿಯಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ 86ನೆ ಕನ್ನಡ ಸಾಹಿತ್ಯ ಸಮ್ಮೇಳನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಹಾವೇರಿ:ಫೆಬ್ರವರಿಯಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ 86ನೆ ಕನ್ನಡ ಸಾಹಿತ್ಯ ಸಮ್ಮೇಳನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ..
ಇಂದು (ಫೆ.5) ವಿಧಾನಸೌಧದಲ್ಲಿ ನಡೆದ ಸಮ್ಮೇಳನ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕನ್ನಡ ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿಯಲ್ಲಿ ಇನ್ನೂ ಸಮರ್ಪಕ ರೀತಿಯಲ್ಲಿ ಪೂರ್ವಸಿದ್ಧತೆ ಆಗಿಲ್ಲದಿರುವುದರಿಂದ ಹಾಗೂ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಸಮ್ಮೇಲೇನ ಮುಂದೂಡಲು ನಿರ್ಧರಿಸಲಾಗಿದೆ ಎಂದು ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಮುಂದಿನ ಮಾರ್ಚ್ 9 ರಂದು ಮತ್ತೆ ಸಭೆ ಸೇರಿ ಸಮ್ಮೇಳನ ದಿನಾಂಕ ಪ್ರಕಟಿಸುವುದಾಗಿ ಹೇಳಿದ್ದಾರೆ.