ಹಾವೇರಿ

ಲ್ಯಾಪ್‌ಟಾಪ್ ವಿತರಣೆಗೆ ಆಗ್ರಹಿಸಿ ಹಾವೇರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ರ‍್ಯಾಲಿ

ಜಿಲ್ಲಾಡಳಿತ ಭವನದ ಬಳಿ ಪ್ರತಿಭಟನೆ, ಸರ್ಕಾರಕ್ಕೆ ಮನವಿ


ಜಿಲ್ಲಾಡಳಿತ ಭವನದ ಬಳಿ ಪ್ರತಿಭಟನೆ, ಸರ್ಕಾರಕ್ಕೆ ಮನವಿ

ಹಾವೇರಿ: ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಲ್ಯಾಪ್‌ಟಾಪ್‌ಗಳ ಅವಶ್ಯಕತೆಇದ್ದು, ತಮಗೂ ಲಾಪ್‌ಟಾಪ್‌ಗಳನ್ನು ವಿತರಿಸಲು ಆಗ್ರಹಿಸಿ ಬುಧವಾರ ಇಲ್ಲಿನ ಸರಕಾರಿ ಇಂಜನಿಯರಿಂಗ್ ಕಾಲೇಜನಿಂದ ಜಿಲ್ಲಾಡಳಿತ ಭವನದವರೆಗೆ ರ‍್ಯಾಲಿ ನಡೆಸಿ ಜಿಲ್ಲಾಡಳಿತ ಭವನದ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಾರ್ಯಲಯದ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದರು.
ಸರ್ಕಾರ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುತ್ತಿದೆ. ಆದರೆ ಲ್ಯಾಪ್‌ಟಾಪ್ ಅತ್ಯವಶ್ಯವಾಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಕಡೆಗಣಿಸಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿರುವ ೧೨ ಸರ್ಕಾರಿ ಇಂಜಿನಿಯರಿಂಗ್‌ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರ ಈ ಕೂಡಲೇ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.
ಎಐಡಿಎಸ್‌ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಇಂಜನಿಯರಿಂಗ್ ವಿದ್ಯಾರ್ಥಿಗಳು, ನಗರದ ಹೊರವಲಯದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಿಂದ ದೇವಗಿರಿಯ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ರ‍್ಯಾಲಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾಭ್ಯಾಸ ನಡೆಸಲು ನಮಗೆ ಲ್ಯಾಪ್‌ಟಾಪ್ ಅವಶ್ಯವಿದ್ದು, ಸರ್ಕಾರ ನಮಗೂ ಲ್ಯಾಪ್‌ಟಾಪ್ ವಿತರಿಸಬೇಕೆಂದು ಆಗ್ರಹಿಸಿ ಜಿಲ್ಲಾಡಳಿತ ಭವನದಲ್ಲಿನ ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವರ ಮೂಲಕ ಸರಕಾರಕ್ಕೆ ಮನವಿ ಅಪಿಸಿದರು.

Show More

Related Articles

Leave a Reply

Your email address will not be published. Required fields are marked *

Back to top button
Close