ಶಿಗ್ಗಾವಿ: ಅತಿವೃಷ್ಟಿ ಹಾಗೂ ಅಕಾಲಿಕ ಮಳೆಗೆ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ತೀವ್ರ ಸಾಲಕ್ಕೆ ನೊಂದ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಗಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರೈತನ್ನು ಮಹದೇವಪ್ಪ ಹನುಮಂತಪ್ಪ ದುಂಡಪ್ಪನವರ (೩೩) ಎಂದು ಗುರುತಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಎರಡು ಲಕ್ಷ ಹಾಗೂ ಕೈಗಡ ರೂಪದಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ೬೦ ಸಾವಿರ ರೂ. ಸಾಲ ಮಾಡಿದ್ದ. ಸಾಲಕ್ಕೆ ಮನನೊಂದು ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಮೃತನಿಗೆಪತ್ನಿ , ತಂದೆ, ತಾಯಿ ಇರುವರು. ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.