Kourava News

ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್‌ವೇಳೆ ಹಚ್ಚಿದ ಸ್ಮೋಕ್ ಕ್ಯಾಂಡಲ್‌ನಿಂದ ಜೋಳದ ಹೊಲಕ್ಕೆ ಬೆಂಕಿ


ಹಿರೇಕೆರೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶನಿವಾರ ಹಿರೇಕೆರೂರುಬಳಿಯ ದೂದಿಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸಿ ಹೆಲಿಕಾಪ್ಟರ್‌ನಿಂದ ಇಳಿದು ಹೊರ ಹೋದ ಕೆಲವೇ ಕ್ಷಣದಲ್ಲಿ ಜೋಳದ ಹೊಲಕ್ಕೆ ಬೆಂಕಿ ಬಿದ್ದಿರುವ ಘಟನೆ ನಡೆದಿದೆ.
ಸಿಎಂ ಯಡಿಯೂರಪ್ಪನವರು ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದಾರೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾರ್ಗದರ್ಶನಕ್ಕೆ ಹಚ್ಚಿದ ಸ್ಮೋಕ್ ಕ್ಯಾಂಡಲ್‌ನಿಂದ ಸ್ಮೋಕ್ ಕ್ಯಾಂಡಲ್‌ನ ಕಿಡಿ ಜೋಳದ ಹೊಲಕ್ಕೆ ಬಿದ್ದಿದೆ. ಜೋಳದ ಹೊಲಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿಯೇ ಇದ್ದ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.