“ಹಳ್ಳಿಕಡೆಗೆ ಹಾವೇರಿ ಜಿಲ್ಲಾಧಿಕಾರಿಗಳ ನಡಿಗೆ”
ಹೊಸನೀರಲಗಿ ಗ್ರಾಮದಲ್ಲಿ ಫೆಬ್ರುವರಿ ೨೦ಕ್ಕೆ ಜಿಲ್ಲಾಧಿಕಾರಿಗಳ ವಾಸ್ತವ್ಯ
ಹಾವೇರಿ: ಹಳ್ಳಿಗಳ ಸಾರ್ವಜನಿಕರ ಅಹವಾಲು ಹಾಗೂ ಬೇಡಿಕೆಗಳ ಕುರಿತಂತೆ ಸ್ಥಳದಲ್ಲಿಯೇ ಕೈಗೊಳ್ಳಬಹುದಾದ ಪರಿಹಾರದ ನಿಟ್ಟಿನಲ್ಲಿ ಇದೇ ಫೆಬ್ರುವರಿ ೨೦ರ ಮೂರನೇ ಶನಿವಾರ ಕಂದಾಯ ಅಧಿಕಾರಿಗಳು ಹಾಗೂ ಇತರ ಇಲಾಖಾ ಅಧಿಕಾರಿಗಳ ಗ್ರಾಮ ವಾಸ್ತವ್ಯ ಆರಂಭಗೊಳ್ಳಲಿದ್ದಯ, ಸವಣೂರ ತಾಲೂಕಿನ ಹೊಸನೀರಲಗಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ವಾಸ್ತವ್ಯ ಮಾಡಲಿದ್ದಾರೆ.
ಕಂದಾಯ ಸಚಿವರ ನಿರ್ದೇಶನದಂತೆ ಹಳ್ಳಿಕಡೆಗೆ ಜಿಲ್ಲಾಧಿಕಾರಿಗಳ ನಡಿಗೆ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಕುರಿತಂತೆ ಜಿಲ್ಲಾಧಿಕಾರಿಗಳು ಸೂಚನೆ ಹೊರಡಿಸಿದ್ದು, ಹೊಸನೀರಲಗಿ ಗ್ರಾಮದ ಗ್ರಾಮದೇವತೆ ದೇವಸ್ಥಾನದ ಆವರಣದಲ್ಲಿ ಜಿಲ್ಲಾಧಿಕಾರಿಗಳು ಅಧಿಕಾರಿಗಳ ತಂಡದೊಂದಿಗೆ ಗ್ರಾಮ ವಾಸ್ತವ್ಯ ಕೈಗೊಂಡು ಸಾರ್ವಜನಿಕರ ಅಹವಾಲುಗಳು, ಬೇಡಿಕೆಗಳನ್ನು ಸ್ವೀಕರಿಸಲಿದ್ದಾರೆ.
ಇದೇ ದಿನ ಫೆಬ್ರುವರಿ ೨೦ ರಂದು ಶನಿವಾರ ಆಯಾ ತಾಲೂಕಾ ತಹಶೀಲ್ದಾರಗಳ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದು, ಹಾವೇರಿ ತಾಲೂಕಿನ ಕೋಳೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ, ಹಿರೇಕೆರೂರು ತಾಲೂಕು ಕೋಡ ಗ್ರಾಮದ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ, ರಾಣೇಬೆನ್ನೂರ ತಾಲೂಕು ನೂಕಾಪೂರ ಗ್ರಾಮದ ಸರ್ಕಾರಿ ಪ್ರಾಥಮ ಶಾಲೆ ಆವರಣದಲ್ಲಿ ಗ್ರಾಮ ವಾಸ್ತವ್ಯ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಬ್ಯಾಡಗಿ ತಾಲೂಕು ಬಿಸಲಹಳ್ಳಿ ಗ್ರಾಮದ ಗ್ರಾ.ಪಂ.ಕಾರ್ಯಾಲಯ , ರಟ್ಟಿಹಳ್ಳಿ ತಾಲೂಕು ಲಿಂಗದೇವರಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆ ಆವರಣ, ಶಿಗ್ಗಾಂವ ತಾಲೂಕು ಮಮದಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣ, ಹಾಗೂ ಹಾನಗಲ್ ತಾಲೂಕು ಮಕರವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ವಾಸ್ತವ್ಯ ನಡೆಸಲು ಸ್ಥಳ ನಿಗಧಿಮಾಡಿದ್ದು, ತಾಲೂಕಾ ಅಧಿಕಾರಿಗಳ ತಂಡದೊಂದಿಗೆ ಗ್ರಾಮಕ್ಕೆ ತೆರಳಿ ಗ್ರಾಮದ ಸಾರ್ವಜನಿಕರಿಂದ ಅಹವಾಲು ಹಾಗೂ ಬೇಡಿಕೆ ಸ್ವೀಕರಿಸಿ ಸೂಕ್ತ ಪರಿಹಾರಕ್ಕೆ ಕ್ರಮವಹಿಸಲು ಆಯಾ ತಾಲೂಕಿ ಎಲ್ಲ ತಹಶೀಲ್ದಾರಗಳಿಗೆ ಸೂಚನೆ ನೀಡಿದ್ದಾರೆ.